
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಗರದ ಸಿವಿಲ್ ಕೋರ್ಟ್ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿ ಕರ್ನಾಟಕದ ಬಿಜೆಪಿ ದೇಶದಲ್ಲಿಯೇ ಅತ್ಯಂತ ಭ್ರಷ್ಟ ಪಕ್ಷ. ನಾವು ನೀಡಿದ್ದ ಜಾಹೀರಾತಿನ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿ ತಮ್ಮ ಭ್ರಷ್ಟಾಚಾರವನ್ನು ಬಯಲು ಮಾಡಲು ಅವರೇ ಕರೆದಿದ್ದಾರೆ. ಬಿಜೆಪಿಯವರಿಗೆ ನಾವು ನಮ್ಮ ಶಕ್ತಿಯನ್ನು ತೋರಿಸುತ್ತೇವೆ ಎಂದು ಹೇಳಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಬಿಜೆಪಿ ಸರ್ಕಾರದ ಮೇಲೆ ಹಗರಣದ ಆರೋಪ ಮಾಡಿದ್ದು ಹಣ ನೀಡದೆ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ 2500 ಕೋಟಿ ರು., ಸಚಿವ ಸ್ಥಾನಕ್ಕೆ 100 ಕೋಟಿ ರು. ನೀಡಬೇಕು ಎಂದು ಹೇಳಿಕೆ ನೀಡಿದ್ದರು. ಅವರು ಬಿಜೆಪಿಯವರಲ್ಲವೇ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು.






























































































































