
ಪಾಟ್ನಾ: ಬಿಜೆಪಿ ನೇತೃತ್ವದ ಎನ್ ಡಿ ಎ ಬಿಹಾರದಲ್ಲಿ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದು ಇತ್ತೀಚಿನ ಟ್ರೆಂಡ್ ಗಳ ಪ್ರಕಾರ 243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ ಯು 203 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಮೂಲಕ ಮುಖ್ಯಮಂತ್ರಿ ನಿತೀಶ್ ಕುಮಾರ್ ಸತತ ಐದನೇ ಬಾರಿಗೆ ಅಧಿಕಾರ ವಹಿಸಿಕೊಳ್ಳಲು ತಯಾರಾಗಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದಂತೆ ಪ್ರತಿಕ್ರಿಸಿದ ಸಚಿವ ಅಶೋಕ್ ಚೌದ್ರಿ ಮತ್ತೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗುತ್ತಾರೆ. ನಾವು ಮೂರನೇ ಎರಡರಷ್ಟು ಬಹುಮತದಿಂದ ಗೆಲ್ಲುತ್ತೇವೆ ಒಮ್ಮೆ ಅವರನ್ನು ಕಡೆಗಣಿಸಲು ಪ್ರಯತ್ನಿಸಿದವರು ಈಗ ಅವರ ಮೌಲ್ಯವನ್ನು ಅರಿತುಕೊಂಡಿದ್ದಾರೆ ಎಂದು ಹೇಳಿದ್ದಾರೆ.






















































