32.1 C
Udupi
Wednesday, April 22, 2026
spot_img
spot_img
HomeBlogಬೆಂಗಳೂರಿನಲ್ಲಿ ನೀರಿನ ಬಿಲ್ ಶೀಘ್ರದಲ್ಲೇ ಹೆಚ್ಚಾಗಲಿದೆ: ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿ ನೀರಿನ ಬಿಲ್ ಶೀಘ್ರದಲ್ಲೇ ಹೆಚ್ಚಾಗಲಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಗ್ರಾಂಡ್ ಸ್ಟೆಪ್ ಮುಂಭಾಗದಲ್ಲಿ 110 ಹಳ್ಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ್ದು ಈ ವೇಳೆ ನನ್ನನ್ನು ಮಿಡಿಯಾದವರು ಬೈಯ್ಯಲಿ, ಜನ ಆದ್ರೂ ಬೈಯ್ರಿ, ವಿರೋಧ ಪಕ್ಷಗಳಾದ್ರೂ ಬೈಯ್ಯಲಿ. ನಾನು ನೀರಿ ಬಿಲ್ ಹೆಚ್ಚಳ ಮಾಡೇ ಮಾಡುತ್ತೇನೆ ಎಂದು ಹೇಳಿದ್ದಾರೆ.

ನಾಗರೀಕರಿಗೆ ಎಷ್ಟು ಮಾಡಿದರೂ ಅಷ್ಟೆ; ಅವರಿಗೆ ಉಪಕಾರದ ಸ್ಮರಣೆ ಇಲ್ಲ. ಬೈತಾರೆ ಕಾಮೆಂಟ್ ಮಾಡ್ತಾರೆ. ವಾಟ್ಸಪ್ ನಲ್ಲಿ ಹಾಕ್ತಾರೆ ಕೆಲವರು ದುಡ್ಡು ಕಟ್ಟೋರು ಕಟ್ಟುತ್ತಾರೆ ಕೆಲವರು ಕಟ್ಟಲ್ಲ ಎಂದು ಹೇಳಿಕೆ ನೀಡಿದ್ದಾರೆ.110 ಹಳ್ಳಿಗಳಿಗೆ ಕಾವೇರಿ ಸಂಪರ್ಕ ಅಭಿಯಾನದಡಿ ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ, ಟಿ ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ ವಿಧಾನಸಭೆಗೆ ಸೇರಿರುವ ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ದೊರೆಯಲಿದೆ. ನೀರು ಮತ್ತು ಪವರ್ ಈ ಎರಡು ಪ್ರಮುಖವಾದ ಇಲಾಖೆ ನಾನು ನೋಡ್ತಾ ಇದ್ದೇನೆ. ಹಿಂದೆ ಎಸ್.ಎಂ.ಕೃಷ್ಣ ಅವಧಿಯಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜು ಖಾಸಗೀಕರಣ ಚರ್ಚೆ ನಡೆದಿತ್ತು. ಅದರ ಬಗ್ಗೆ ಫ್ರಾನ್ಸ್ ಗೆ ಎಲ್ಲಾ ಹೋಗಿ ನೋಡಿಕೊಂಡು ಬಂದೆ. ನೋಡಿ ಬಂದು ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗುತ್ತೆ ಎಂದು ಮಾಹಿತಿ ‌ನೀಡಿದೆ. ಸಾಕಷ್ಟು ವಿರೋಧ ವ್ಯಕ್ತವಾದ ನಂತರ ಕೈ ಬಿಟ್ಟೆವು. ಈಗಲೂ ನಾನು ಸಚಿವನಾದ ಮೇಲೆ ಮತ್ತೆ ಕೆಲವರು ಬಂದರೂ ಆಗಲ್ಲ ನಾನಿರುವವರೆಗೆ ಆಗಲ್ಲ ಅಂತ ಹೇಳಿದ್ದೇನೆ.ನೀರಿನ ದರ ಸಾಕಷ್ಟು ವರ್ಷದಿಂದ ಏರಿಸಿಲ್ಲ. 1.4 ಕೋಟಿ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ‌. ಶರಾವತಿ ಕುಡಿಯುವ ನೀರಿನ ಯೋಜನೆಯು ಇದೆ. ಅದಕ್ಕೆ ಆ ಭಾಗದಲ್ಲಿ ವಿರೋಧವಿದೆ‌.ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಮೀ ಯಾರು ಬೋರ್ ವೆಲ್ ಹಾಕುವಂತಿಲ್ಲ. ಯಾರು ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ಹೊಸ ಕಾನೂನು ಬಂದಿದೆ. ರಾಜ್ಯಪಾಲರು ಇದಕ್ಕೆ ಸಹಿ ಹಾಕಿದ್ದಾರೆ ಎಂದು ಸದ್ಯದಲ್ಲೇ ನೀರಿನ ಬೆಲೆ ಹೆಚ್ಚಳದ ಕುರಿತು ಡಿಸಿಎಂ ಡಿಕೆಶಿ ಸೂಚನೆ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page