
ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ಹಿನ್ನೆ,ಲೆ, ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು 10 ಲಕ್ಷದಿಂದ 25 ಲಕ್ಷಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸರಕಾರ ತಿಳಿಸಿದೆ.
ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಆಡಳಿತ ಮಂಡಳಿ ತಲಾ 10 ಲಕ್ಷ ರೂಪಾಯಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ 5 ಲಕ್ಷ ಪರಿಹಾರ ಘೋಷಿಸಿದೆ.





