27.4 C
Udupi
Monday, May 4, 2026
spot_img
spot_img
HomeBlogಬೆಂಗಳೂರು; ಹಸುಗಳ ಕೆಚ್ಚಲು ಕೊಯ್ದು ಅನಾಗರಿಕ ಘಟನೆ, ಯಾರೇ ಆಗಲಿ ಕಠಿಣ ಕ್ರಮ ಕೈಗೊಳ್ಳಿ

ಬೆಂಗಳೂರು; ಹಸುಗಳ ಕೆಚ್ಚಲು ಕೊಯ್ದು ಅನಾಗರಿಕ ಘಟನೆ, ಯಾರೇ ಆಗಲಿ ಕಠಿಣ ಕ್ರಮ ಕೈಗೊಳ್ಳಿ

ಸರಕಾರದ ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ ರಾಜ್ಯದಲ್ಲಿ ಅಶಾಂತಿ : ವಿ. ಸುನಿಲ್ ಕುಮಾರ್

ಬೆಂಗಳೂರು: ಚಾಮರಾಜಪೇಟೆಯಲ್ಲಿ, ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ವಿನಾಯಕ ನಗರದಲ್ಲಿ ನಡೆದಿದೆ. ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಕೊಯ್ದಿದ್ದು ಇದೀಗ ಅವುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ

. ಈ ಬಗ್ಗೆ ಪ್ರತಿಕ್ರಿಸಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ‌ ಕೆಚ್ಚಲು ಕೊಯ್ದು ಅನಾಗರಿಕ, ಕ್ರೌರ್ಯ ಮೆರೆದಿರುವ ಘಟನೆ ತೀವ್ರ ವೇದನೆ ಸೃಷ್ಟಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ ? ಎಂಬ ಗಂಭೀರ ಪ್ರಶ್ನೆಯನ್ನು ಸೃಷ್ಟಿಸಿದೆ.
ಗಾವೋ ವಿಶ್ವಸ್ಯ ಮಾತರಃ ಎಂದು ನಂಬಿದ ನಾಡು ನಮ್ಮದು. ಗೋಮಾತೆ ಎಂದೇ ಕರೆಯಲಾಗುತ್ತದೆ. ಅಂಥ ತಾಯಿಯ ಕೆಚ್ಚಲನ್ನೇ ಕತ್ತರಿಸುವಂಥ ವಿಕೃತ ಸ್ಥಿತಿಗೆ ಸಮಾಜ ಜಾರಿದೆ ಎಂದರೆ ಎಲ್ಲರೂ ನಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಬೇಕು. ಆದರೆ ಈ ಸರ್ಕಾರದಲ್ಲಿ ಏನು ಮಾಡಿದರೂ ನಡೆಯುತ್ತದೆ ಎಂಬ ಸನ್ನಿವೇಶ ನಿರ್ಮಾಣವಾಗಿದ್ದು ಕಾನೂನಿನ ಭಯ ಇಲ್ಲದಂತಾಗಿದೆ.
ಈ ಘಟನೆಗೆ ಕಾರಣವಾದ ವ್ಯಕ್ತಿಗಳು ಯಾರೇ ಆದರೂ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ವೋಟ್ ಬ್ಯಾಂಕ್ ರಾಜಕಾರಣ ಕರ್ನಾಟಕದ ನೆಮ್ಮದಿ ಕಳೆಯುತ್ತಿದೆ. ಆರೋಪಿಗಳು ಯಾರ ಬಾಂಧವರೇ ಆದರೂ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page