ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾದ ವಿಪಕ್ಷಗಳು

ಬೆಳಗಾವಿ: ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು ಹೀಗಾಗಿ ಕುರ್ಚಿ ಕದನದಿಂದ ಸದ್ದುಮಾಡುತ್ತಿದ್ದ ಕರ್ನಾಟಕ ರಾಜಕೀಯ ಇದೀಗ ಬೆಳಗಾವಿಯತ್ತ ಹೆಜ್ಜೆ ಇಟ್ಟಿದೆ. ವಿಪಕ್ಷಗಳು ಸರಣಿ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರವನ್ನ ಕಟ್ಟಿಹಾಕಲು ಸಜ್ಜುಗೊಂಡಿದ್ದರೆ ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್ ನಾಯಕರು ತಯಾರಿ ನಡೆಸಿದ್ದಾರೆ.
ಮೊದಲ ದಿನವೇ ಉತ್ತರ ಕರ್ನಾಟಕ ಬಗ್ಗೆ ಚರ್ಚೆಗೆ ನಿಲುವಳಿ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು ಬೆಳಗಾವಿಯಲ್ಲಿ 20 ಸಾವಿರ ರೈತರನ್ನು ಸೇರಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಿದೆ.
ಬಿಜೆಪಿ ಬತ್ತಳಿಕೆಯಲ್ಲಿರುವ ಅಸ್ತ್ರಗಳು:
- ಕಾನೂನು ಸುವ್ಯವಸ್ಥೆ ವಿಷಯ ಚಿಂತನೆ, ಚರ್ಚೆ
- ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಪ್ರಸ್ತಾಪ
- ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪಕ್ಕೆ ಸಜ್ಜು
- ವಿಪಕ್ಷಗಳ ಶಾಸಕರ ಅನುದಾನದ ಚರ್ಚೆ
- ಪೊಲೀಸರ ಮೇಲೆ ಜೈಲಿನಲ್ಲಿನ ಕೈದಿಗಳ ಹಲ್ಲೆ
ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್ ನಡೆಸಿದ ಸಿದ್ಧತೆ :
- ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರದ ವೈಫಲ್ಯ ಬಗ್ಗೆ ಪ್ರತ್ಯಾರೋಪ,
- ಕಬ್ಬು ಬೆಳೆ ವಿಚಾರದಲ್ಲೂ ಕೇಂದ್ರದ ವಿರುದ್ಧ ಆರೋಪ
- ಕಬ್ಬು, ಮೆಕ್ಕೆಜೋಳ ಬೆಳೆಗಾರರ ಬೆನ್ನಿಗೆ ಸರ್ಕಾರ ನಿಂತಿದೆ ಎಂದು ಸಮರ್ಥನೆ ಮಾಡಿಕೊಳ್ಳಲು ಯೋಜಿಸಿದೆ.
- 1 ಲಕ್ಷ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿ ಜನರ ಕಲ್ಯಾಣ ಕಾರ್ಯಗಳನ್ನು ಹಮ್ಮಿಕೊಂಡಿರುವ ಬಗ್ಗೆ ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ಮಾಡಿದೆ.



















