28.5 C
Udupi
Thursday, July 3, 2025
spot_img
spot_img
HomeBlogಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ : ಮಾರ್ಗಸೂಚಿ ಬಿಡುಗಡೆ

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ : ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕಳೆದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಬ್ಯಾನ್‌ಗೊಳಿಸಿದ್ದು ಈ ಹಿನ್ನೆಲೆ ಇದರ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿ ಮಾರ್ಗಸೂಚಿಯನ್ನೂ ಬಿಡುಗಡೆಗೊಳಿಸಿದೆ.

ಈ ಸಂಬಂಧ ಮಾರ್ಗಸೂಚಿಯನ್ನು ಹೊರಡಿಸಿದ ಕೇಂದ್ರ ಸರ್ಕಾರ ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮಾರ್ಗಸೂಚಿಗಳು:

  • ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
  • ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
  • ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು.
  • ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದಾಗಿದೆ.
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page