30.7 C
Udupi
Tuesday, March 10, 2026
spot_img
spot_img
HomeBlogಬೈಲೂರು : ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ನೀರೆ...

ಬೈಲೂರು : ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ನೀರೆ ಬೈಲೂರು ಇದರ ಜಂಟಿ ಆಶ್ರಯದಲ್ಲಿ

ಮಾರ್ಚ್ 15ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೈಲೂರು : ಮಾರ್ಚ್ 15 ರಂದು ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳ ಕಟ್ಟೆ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ನೀರೆ ಬೈಲೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಕೆ ಎಸ್ ಹೆಗ್ಡೆ ಆಸ್ಪತ್ರೆ ಪಳ್ಳಿಕ್ರಾಸ್ ಬೈಲೂರಿನಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.

ಸಾರ್ವಜನಿಕರಿಗೆ ಉಚಿತವಾಗಿ ವಿವಿಧ ಆರೋಗ್ಯ ತಪಾಸಣೆಗಳನ್ನು ಇಲ್ಲಿ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದ್ದು ಶಿಬಿರದಲ್ಲಿ ಫಿಜಿಷಿಯನ್, ಜನರಲ್ ಸರ್ಜರಿ, ಕಿವಿ-ಮೂಗು-ಗಂಟಲು (ENT), ಮಹಿಳಾ ಹಾಗೂ ಪ್ರಸೂತಿ ವಿಭಾಗ (OBG), ಚರ್ಮರೋಗ, ಅಸ್ಥಿರೋಗ, ಮಕ್ಕಳ ರೋಗ ಹಾಗೂ ಕಣ್ಣಿನ ತಪಾಸಣೆ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರಿಂದ ತಪಾಸಣೆ ನಡೆಯಲಿದೆ.

ಇದೇ ವೇಳೆ ಅಗತ್ಯವಿದ್ದವರಿಗೆ ECG ಹಾಗೂ ರಕ್ತ ಪರೀಕ್ಷೆ ಸೇರಿದಂತೆ ಮೂಲಭೂತ ಪರೀಕ್ಷೆಗಳ ಸೌಲಭ್ಯವೂ ಲಭ್ಯವಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆಯ ಸದುಪಯೋಗ ಪಡೆಯುವಂತೆ ಆಯೋಜಕರು ಮನವಿ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page