31.9 C
Udupi
Wednesday, May 6, 2026
spot_img
spot_img
HomeBlogಭಾರತ-ಪಾಕ್ ಕದನ ವಿರಾಮ ಘೋಷಣೆ ಮಾಡಿಸಿದ್ದು ಯಾರು ಎನ್ನುವ ಸತ್ಯವನ್ನು ಪ್ರಧಾನಿ ಮೋದಿ ಹೇಳಬೇಕು: ಸಚಿವ...

ಭಾರತ-ಪಾಕ್ ಕದನ ವಿರಾಮ ಘೋಷಣೆ ಮಾಡಿಸಿದ್ದು ಯಾರು ಎನ್ನುವ ಸತ್ಯವನ್ನು ಪ್ರಧಾನಿ ಮೋದಿ ಹೇಳಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರುಗಿ: ರಾಜ್ಯ ಪಂಚಾಯತ್ ಅಭಿವೃದ್ಧಿ ಹಾಗೂ ಗ್ರಾಮೀಣ ಸಚಿವ ಪ್ರಿಯಾಂಕ್ ಖರ್ಗೆ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆಯುತ್ತಿರುವ ಯುದ್ಧಕ್ಕೆ ಕದನ ವಿರಾಮ ಘೋಷಣೆ ಮಾಡಿಸಿದ್ದು ಯಾರು ಎನ್ನುವ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಜನರ ಮುಂದೆ ಹೇಳಬೇಕು ಎಂದು ಆಗ್ರಹಿಸಿದ್ದಾರೆ.

ಅಮೇರಿಕಾ ಅಧ್ಯಕ್ಷ ಟ್ರಂಪ್ ಕದನ ವಿರಾಮ ಮಾಡಿದ್ದು ತಾನು ಎಂದು ಎರಡು ಮೂರು ಬಾರಿ ಹೇಳಿಕೆ ನೀಡಿದ್ದು ಪ್ರಧಾನಿ ಮೋದಿ ಕನಿಷ್ಠ ಪಕ್ಷ ಅದನ್ನು ಅಲ್ಲಗೆಳೆಯುವ ಧೈರ್ಯವು ಮಾಡುತ್ತಿಲ್ಲ. ಈಗಲಾದರೂ ಪ್ರಧಾನಿ ಮೋದಿ ದೇಶದ ಜನರಿಗೆ ಕದನ ವಿರಾಮ ಘೋಷಣೆ ಮಾಡಿಸಿದ್ದು ಅಮೆರಿಕಾ ನಾ? ಮೋದಿಯ? ಅಥವಾ ಪಾಕಿಸ್ತಾನ? ಎಂದು ಹೇಳಬೇಕು ಎಂದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಮೋದಿಯವರಿಗೆ ನಾವು ಸಂಪೂರ್ಣ ಬೆಂಬಲ ನೀಡಿದ್ದರೂ ಪ್ರಧಾನಿ ಮೋದಿ ಸರ್ವ ಪಕ್ಷಗಳೊಂದಿಗೆ ಚರ್ಚಿಸುತ್ತಿಲ್ಲ. ಸಂಸತ್ ಅಧಿವೇಶನ ಕೂಡ ಕರೆಯುತ್ತಿಲ್ಲ ವಿದೇಶಿ ವ್ಯಾಪಾರ ನಿಲ್ಲಿಸುವ ಟ್ರಂಪ್ ಬೆದರಿಕೆಗೆ ಬಗ್ಗಿ ನೀವು ಈ ನಿರ್ಣಯ ಕೈಗೊಂಡಿದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಾರಿ ಭಾರತ ವಿದೇಶಾಂಗ ನೀತಿಯಲ್ಲಿ ಸೋತಿದೆ. ಪಹಲ್ಗಾಮ್ ದಾಳಿ ನಡೆಸಿದ ನಾಲ್ವರು ಉಗ್ರರು ಈಗ ಎಲ್ಲಿದ್ದಾರೆ? ದೇಶದ ಒಳಗಡೆ ಬಂದಿದ್ದಾರಾ ಅಥವಾ ಹೊರಗೆ ಹೋಗಿದ್ದಾರಾ? ಏಕೆ ಉತ್ತರಿಸುತ್ತಿಲ್ಲ ಎಂದು ಪ್ರಶ್ನಿಸಿದ ಖರ್ಗೆ ಕೂಡಲೇ ಈ ಕುರಿತು ಸಂಸತ್ ಅಧಿವೇಶನ ಕರೆದು ಚರ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page