
ಮುಂಬೈ: ಜುಲೈ 15 ರಂದು ಭಾರತದಲ್ಲಿ ಎಲಾನ್ ಮಸ್ಕ್ ನೇತೃತ್ವದ ಎಲೆಕ್ಟ್ರಿಕ್ ಕಾರು ಕಂಪನಿ ಟೆಸ್ಲಾ ತನ್ನ ಮೊದಲ ಶೋರೂಂ ತೆರೆಯಲಿದೆ.
ಮುಂದಿನ ವಾರ ಮುಂಬೈನಲ್ಲಿ ತನ್ನ ಮೊದಲ ಶೋರೂಂ ತೆರೆಯಲಿದ್ದು ಈ ಮೂಲಕ ಎಲೆಕ್ಟ್ರಿಕ್ ವಾಹನ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಟೆಸ್ಲಾ ವಿಶ್ವದ ಮೂರನೇ ಅತಿದೊಡ್ಡ ಅಟೋಮೊಬೈಲ್ ಮಾರುಕಟ್ಟೆಯಾದ ಭಾರತದಲ್ಲಿ ಅಧಿಕೃತ ಕಾರ್ಯಾಚರಣೆಯನ್ನು ಪ್ರಾರಂಭಿಸುವತ್ತ ಹೆಜ್ಜೆ ಇಟ್ಟಿದೆ.
ಬ್ಲೂಮ್‌ಬರ್ಗ್ ವರದಿಯ ಪ್ರಕಾರ ಚೀನಾದಲ್ಲಿ ತಯಾರಾದ ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡಲು ಟೆಸ್ಲಾ ಮುಂದಾಗಿದ್ದು ಪ್ರಸ್ತುತ ವಿಶ್ವದ ಅತ್ಯಂತ ಜನಪ್ರಿಯ ಎಲೆಕ್ಟ್ರಿಕ್ ಕ್ರಾಸ್‌ಓವರ್ ಎಸ್‌ಯುವಿ ಮಾಡೆಲ್ ವೈ ಕಾರುಗಳನ್ನು ಆರಂಭದಲ್ಲಿ ಭಾರತದಲ್ಲಿ ಮಾರಾಟ ಮಾಡಲು ಟೆಸ್ಲಾ ಸಿದ್ಧತೆ ನಡೆಸಿದೆ.
ಈಗಾಗಲೇ ಟೆಸ್ಲಾ ತನ್ನ ಶಾಂಘೈ ಸ್ಥಾವರದಿಂದ ಐದು ಮಾಡೆಲ್ ವೈ ವಾಹನಗಳನ್ನು ಮುಂಬೈಗೆ ತಂದಿದ್ದು ಈ ವಾಹನದ ಮೂಲ ಬೆಲೆ 27.70 ಲಕ್ಷ ರೂ. ಇದೆ. ಚೀನಾದಿಂದ ಭಾರತಕ್ಕೆ ಬಂದ ವೆಚ್ಚ, ಆಮದು ಸುಂಕ ವಿಧಿಸಿದ ಬಳಿಕ ಈ ಕಾರಿನ ದರ ಎಷ್ಟಿರಬಹುದು ಎನ್ನುವುದು ಅಧಿಕೃತವಾಗಿ ಮುಂದಿನ ದಿನಗಳಲ್ಲಿ ತಿಳಿದು