
ಮಂಗಳೂರು: ಕೆಎಸ್ಆರ್ಟಿಸಿ ಬಸ್ ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ರಸ್ತೆಗೆ ಎಸೆಯಲ್ ಪಟ್ಟು, ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ.
ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿಬಸ್ ಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ ತಂಗಿ ಹತ್ತಿದ್ದು, ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿ ರಸ್ತೆ ತಿರುವಿನಲ್ಲಿ ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದೆ. ಈ ಸಂದರ್ಭದಲ್ಲಿ ಬಾಗಿಲ ಬಳಿಯ ನಿಂತಿದ್ದ ಅಕ್ಕ ತಂಗಿ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟಿದ್ದಾರೆ. ಈ ದೃಶ್ಯ ರಸ್ತೆಯ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.






















































