28.6 C
Udupi
Sunday, April 26, 2026
spot_img
spot_img
HomeBlogಮಂಗಳೂರು: ಬಿಲ್ಲವ ಸಮಾಜದ ಹೆಣ್ಮಕ್ಕಳ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ ಅರಣ್ಯಾಧಿಕಾರಿ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಬಿಲ್ಲವ ಸಮಾಜದ ಹೆಣ್ಮಕ್ಕಳ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ ಅರಣ್ಯಾಧಿಕಾರಿ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಅರಣ್ಯಾಧಿಕಾರಿಯೊಬ್ಬರು ಬಿಲ್ಲವ ಸಮಾಜದ 1 ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರು ಎಂದು ಹೇಳಿದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಬೆಳ್ಳಾರೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ದೂರಿನಡಿ ಎಫ್ಐಆರ್ ದಾಖಲಾಗಿದ್ದು ಬಿಎನ್ಎಸ್ 79 ಸೆಕ್ಷನ್ ನಡಿ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.

ದೂರು ನೀಡಿದರೂ ಪ್ರಕರಣ ದಾಖಲಿಸದ ಹಿನ್ನೆಲೆ ನಾಳೆ ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿತ್ತು. ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ. ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್ ಆಗಿತ್ತು. ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಬಿಲ್ಲವ ಸಮಾಜದ ಹೆಣ್ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಲಕ್ಷ ಬಿಲ್ಲವ ಹುಡುಗಿಯರು ಸೂಳೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆ ಕೂಡ ಇದೆ, ಹಿಂದುತ್ವದ ಹುಡುಗರು ಸೂಳೆಯರನ್ನಾಗಿ ಮಾಡಿದ್ದಾರೆ. ಬಿಲ್ಲವ ಸಮಾಜದ 1 ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ದೂರವಾಣಿಯಲ್ಲಿ ಹಿಂದೂ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಸಂಜೀವ ಪೂಜಾರಿ ಹೇಳಿಕೆ ನೀಡಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page