
ಡಿ 02 ರಂದು ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿ ಉದ್ಘಾಟನೆ ಮತ್ತು ವಾರ್ಷಿಕ ಪ್ರತಿಭಾ ದಿನಾಚರಣೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ನೆರವೇರಿಸಿದರು ಬಳಿಕ ಮಾತನಾಡಿದ ಅವರು ಇಂದಿನ ವಿದ್ಯಾರ್ಥಿಗಳಲ್ಲಿ ಜೀವನದ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಭಾಯಿಸುವಂತಹ ಆತ್ಮ ವಿಶ್ವಾಸ ಬೆಳೆಯಬೇಕು. ವಿದ್ಯಾರ್ಥಿ ಕ್ಷೇಮಪಾಲನಾ ವೇದಿಕೆಗಳ ಚಟುವಟಿಕೆಗಳು ಕೇವಲ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮೀಸಲಾಗಿರದೆ ಸಮಾಜದ ಜ್ವಲಂತ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸಬೇಕು ಎಂದರು.
ದೇಶದ ಅನೇಕ ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಅನೇಕ ಹೋರಾಟದ ಮೂಲಕ ಬಗೆಹರಿಸಿದ್ದಾರೆ. ಅಂತಹ ಸಮರ್ಪಣಾ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ಗಣನಾಥ ಶೆಟ್ಟಿ ಎಕ್ಕಾರು, ವಿದ್ಯಾರ್ಥಿಗಳು ಜ್ಞಾನದೊಂದಿಗೆ ಉದ್ಯೋಗದ ಕೌಶಲವನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಸಹಬಾಳ್ವೆಯನ್ನು ಬೆಳೆಸುವಂತಹ ಗುಣವನ್ನು ಬೆಳೆಸಿಕೊಳ್ಳಬೇಕೆಂದು ನುಡಿದರು. ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷರಾದ ಟಿ.ಎಂ ಮಂಜುನಾಥ, ಕಾರ್ಯದರ್ಶಿ ನಾರಾಯಣ್, ಕೋಶಾಧಿಕಾರಿ ಶ್ರೀನಾಥ್ ರಾಜ್, ಹಾಲೇಶಪ್ಪ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್ ರೈ.ಕೆ ಮಂಜುನಾಥ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯ ಮಟ್ಟದ ಅತ್ಯಂತ ಪ್ರತಿಷ್ಠಿತ ಕಾಲೇಜು ಇದರ ಕಾರ್ಯಕ್ಷಮತೆಯನ್ನು ರಕ್ಷಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ನುಡಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಚಂದ್ರಾವತಿ, ಐಕ್ಯೂಎಸಿ ಸಂಚಾಲಕರಾದ ಸುಷ್ಮಾರಾವ್ ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.
ದ್ವಿತೀಯ, ಎಂ.ಕಾಂನ ವಿನಯನಾತು ಹಾಗೂ ಶ್ರೇಯ ಜೈನ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ರಕ್ಷಿತಾ ಶೆಟ್ಟಿ ಎಲ್ಲರನ್ನೂ ಸ್ವಾಗತಿಸಿದರೆ, ಮೈತ್ರಿ ಬಿ, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರು ಅಭಿನಂದನಾ ಕಾರ್ಯ ನೆರವೇರಿಸಿದರು. ವಜೆರೇಶ್ ಧನ್ಯವಾದ ಸಮರ್ಪಿಸಿದರು



















