30.9 C
Udupi
Monday, April 13, 2026
spot_img
spot_img
HomeBlogಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಅಪರಾಧವಲ್ಲ ಎಂಬ ಆದೇಶವನ್ನು ಹಿಂಪಡೆದ ಹೈಕೋರ್ಟ್

ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಅಪರಾಧವಲ್ಲ ಎಂಬ ಆದೇಶವನ್ನು ಹಿಂಪಡೆದ ಹೈಕೋರ್ಟ್

ಬೆಂಗಳೂರು: ಜುಲೈ 10ರಂದು ಹೈಕೋರ್ಟ್ ಅಂತರ್ಜಾಲದ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b) ಅಡಿ ಅಪರಾಧವಾಗುವುದಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದು ಇದೀಗ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಈ ಆದೇಶ ದೋಷಪೂರಿತವಾಗಿದೆ ಎಂದು ಹೇಳಿದೆ.

ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b)ಯಲ್ಲಿ ತಿಳಿಸಿರುವಂತೆ, ಯಾವುದೇ ವ್ಯಕ್ತಿಯು ಮಕ್ಕಳ ಆಶ್ಲೀಲ ಚಿತ್ರಗಳನ್ನು ಸಿದ್ಧಪಡಿಸುವುದು ಮತ್ತು ಅದನ್ನು ವಿದ್ಯುನ್ಮಾನ ಉಪಕರಣಗಳ ಮೂಲಕ ಹಂಚಿಕೊಳ್ಳುವುದಕ್ಕೆ ಶಿಕ್ಷೆ ವಿಧಿಸಲು ಅವಕಾಶವಿದೆ. ಅರ್ಜಿದಾರರು ಮಕ್ಕಳ ಆಶ್ಲೀಲ ಚಿತ್ರಗಳನ್ನು ಸಿದ್ಧಪಡಿಸಿಲ್ಲ. ಜೊತೆಗೆ, ಅದನ್ನು ಯಾರೊಂದಿಗೂ ಹಂಚಿಕೊಂಡಿಲ್ಲ, ಕೇವಲ ವೀಕ್ಷಿಸಿದ್ದಾರೆ. ಹೀಗಾಗಿ, ಸೆಕ್ಷನ್ 67B(b) ಅಡಿ ಅಪರಾಧವಾಗುವುದಿಲ್ಲ ಎಂದು ನ್ಯಾಯಪೀಠ ಈ ಹಿಂದೆ ತಿಳಿಸಿದ್ದು ಆದರೆ, ಅರ್ಜಿದಾರರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b) ಅಡಿ ಪ್ರಕರಣ ದಾಖಲಾಗಿದ್ದು ಈ ಸೆಕ್ಷನ್ ಮಕ್ಕಳ ಆಶ್ಲೀಲ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕುವುದು, ವೀಕ್ಷಿಸುವುದು, ಡೌನ್‌ಲೋಡ್ ಮಾಡುವುದು ಹಾಗೂ ಪ್ರಚಾರ ಮಾಡುವುದೂ ಸೇರಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧ ಪ್ರಕರಣ ರದ್ದುಪಡಿಸಲು ಅವಕಾಶವಿಲ್ಲ. ಹೀಗಾಗಿ, ಆದೇಶ ಹಿಂಪಡೆಯುತ್ತಿರುವುದಾಗಿ ಪೀಠ ಹೇಳಿದೆ.

ಘಟನೆಯ ಹಿನ್ನೆಲೆ:

2023ರ ಮಾರ್ಚ್ 23ರಂದು ಅರ್ಜಿದಾರ ವ್ಯಕ್ತಿ ಮಧ್ಯಾಹ್ನ 3.30ರಿಂದ 4.40 ಗಂಟೆ ಅವಧಿಯಲ್ಲಿ ತನ್ನ ಮೊಬೈಲ್ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳನ್ನು ವೀಕ್ಷಣೆ ಮಾಡಿದ್ದರು. ಈ ಸಂಬಂಧ ಕೇಂದ್ರ ಸರ್ಕಾರ ಜಾರಿ ಮಾಡಿರುವ ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪ್ರಾರಂಭಿಸಿರುವ ಪೋರ್ಟಲ್ ಮೂಲಕ ಮಾಹಿತಿ ಪಡೆದಿದ್ದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ನೀಡಿದ ಮಾಹಿತಿಯಂತೆ ಬೆಂಗಳೂರು ನಗರ ಸಿಐಡಿ ಘಟಕ ಬೆಂಗಳೂರು ಸೈಬರ್ ಕ್ರೈಂ ಠಾಣೆಗೆ ವರದಿಯೊಂದನ್ನು ರವಾನಿಸಿತ್ತು.

ಈ ವರದಿಯನ್ನು ಪರಿಶೀಲಿಸಿ ಮಕ್ಕಳ ಆಶ್ಲೀಲ ವಿಡಿಯೋ ಪರಿಶೀಲಿಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದ್ದು, ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b) ಅಡಿ ಪ್ರಕರಣ ದಾಖಲಾಗಿತ್ತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು ಅರ್ಜಿದಾರರು ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ವ್ಯಸನಿಯಾಗಿದ್ದಾರೆ. ಆದರೆ ಈ ವಿಡಿಯೋವನ್ನು ಸಿದ್ಧಪಡಿಸಿಲ್ಲ ಮತ್ತು ಯಾರಂದಿಗೂ ಹಂಚಿಕೊಳ್ಳಲಿಲ್ಲ. ಹೀಗಾಗಿ ಈ ದೂರು ರದ್ದುಪಡಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page