26.8 C
Udupi
Thursday, June 25, 2026
spot_img
spot_img
HomeBlogಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ: ಟಿಕೆಟ್ ಕೈತಪ್ಪುವ ಎಚ್ಚರಿಕೆ – ಬಿ.ಕೆ. ಹರಿಪ್ರಸಾದ್

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ: ಟಿಕೆಟ್ ಕೈತಪ್ಪುವ ಎಚ್ಚರಿಕೆ – ಬಿ.ಕೆ. ಹರಿಪ್ರಸಾದ್

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಂಗಳೂರಿನಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ನಾಯಕರು ಗಂಭೀರವಾಗಿ ತೆಗೆದುಕೊಳ್ಳಬೇಕು. ಈ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದವರಿಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಸುಳ್ಯ ಕ್ಷೇತ್ರದ ಹಲವು ಮತಗಟ್ಟೆಗಳಲ್ಲಿ ಇನ್ನೂ ಬೂತ್ ಲೆವೆಲ್ ಏಜೆಂಟ್‌ಗಳ ನೇಮಕ ಪೂರ್ಣವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಒಂದು ವಾರದೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ನೈಜ ಮತದಾರರ ಹೆಸರುಗಳು ಕೈಬಿಡದಂತೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು‌. ಕೊರಗ, ಮಲೆಕುಡಿಯ ಸೇರಿದಂತೆ ಆದಿವಾಸಿ ಸಮುದಾಯದ ಮತದಾರರು ಹೊರಗುಳಿಯುವ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಈ ಕುರಿತು ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಅಗತ್ಯವಿದ್ದರೆ ವಿಶೇಷ ಅಭಿಯಾನ ಕೈಗೊಳ್ಳುವ ಭರವಸೆ ಸಿಕ್ಕಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯ ಕ್ರಾಸ್‌ ವೋಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಸಚಿವ ಸ್ಥಾನ ವಿಚಾರವಾಗಿ ಉಂಟಾದ ಚರ್ಚೆಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಪಕ್ಷದ ಬಗ್ಗೆ ಸಲಹೆ ನೀಡುವವರು ಮೊದಲು ಪಕ್ಷಕ್ಕಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page