32.4 C
Udupi
Friday, May 1, 2026
spot_img
spot_img
HomeBlogಮತ್ತೆ ಗಗನಕ್ಕೇರಿದ ಈರುಳ್ಳಿ ಬೆಳ್ಳುಳ್ಳಿ ದರ..!

ಮತ್ತೆ ಗಗನಕ್ಕೇರಿದ ಈರುಳ್ಳಿ ಬೆಳ್ಳುಳ್ಳಿ ದರ..!

ಬೆಂಗಳೂರು: ದಿನದಿಂದ ದಿನಕ್ಕೆ ಈ ಬೆಲೆ ಏರಿಕೆಯ ಪೆಟ್ಟು ಜನಸಾಮಾನ್ಯರ ಮೇಲೆ ಬೀಳುತ್ತಿದ್ದು ಇದೀಗ ಬೆಂಗಳೂರಿನಲ್ಲಿ ಈರುಳ್ಳಿ ಬೆಳ್ಳುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ರಿಟೇಲ್ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿ ಇದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್ನಲ್ಲಿ 70 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಎಪಿಎಂಸಿಯಲ್ಲಿ ಹೋಲ್ಸೇಲ್ ನಲ್ಲಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ ಎಂದು ವರದಿಯಾಗಿದೆ.

ಬೆಳ್ಳುಳ್ಳಿ ದರ ಈಗಾಗಲೇ ಅರ್ಧಶತಕ ಬಾರಿಸಿ ಮುನ್ನುಗ್ಗುತ್ತಿದೆ. ಎಪಿಎಂಸಿಯಲ್ಲಿ ಸಾಮಾನ್ಯ ಬೆಳ್ಳುಳ್ಳಿಗೆ 400 ರಿಂದ 450 ರುಪಾಯಿಗೆ ಮಾರಾಟವಾಗುತ್ತಿದೆ. ಫಸ್ಟ್ ಕ್ವಾಲಿಟಿ 450 ರಿಂದ 500 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಇತ್ತ ರಿಟೇಲ್ ಮಾರುಕಟ್ಟೆಯಲ್ಲಿ, ಅಂದರೆ ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣಪುಟ್ಟ ಮಾರುಕಟ್ಟೆಗಳಲ್ಲಿ ಸಾಮಾನ್ಯ ಬೆಳ್ಳುಳ್ಳಿ ಕೆಜಿಗೆ 450 ರಿಂದ 500 ರೂಪಾಯಿಗೆ ಮಾರಾಟವಾಗುತ್ತಿದೆ.

ಸಾಧಾರಣ ಈರುಳ್ಳಿ ಕೆಜಿಗೆ 40 ರಿಂದ 50 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಉತ್ತಮ ಗುಣಮಟ್ಟದ ಈರುಳ್ಳಿ ಕೆಜಿಗೆ 60 ರಿಂದ 70 ರೂಪಾಯಿಗೆ ಮಾರಾಟವಾಗುತ್ತದೆ. ಸಣ್ಣಪುಟ್ಟ ಮಾರುಕಟ್ಟೆಯಲ್ಲಿ, ರಸ್ತೆಬದಿಯಲ್ಲಿ ಸಾಮಾನ್ಯ ಈರುಳ್ಳಿ ಕೆಜಿಗೆ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಕೆಜಿಗೆ 70 ರಿಂದ 80 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಬೆಳೆ ನಾಶವಾಗಿದ್ದು ಅಲ್ಲದೆ ಹೊರ ರಾಜ್ಯಗಳಿಂದ, ರಾಜ್ಯಕ್ಕೆ ಬರಬೇಕಿದ್ದ ಈರುಳ್ಳಿ, ಬೆಳ್ಳುಳ್ಳಿ ಆಮದು ಆಗದಿರುವುದೇ ದರ ಏರಿಕೆಗೆ ಕಾರಣ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page