
ಪುತ್ತೂರು: ಬಿಜೆಪಿ ಮುಖಂಡ ಪಿ.ಜಿ ಜಗನ್ನಿವಾಸ್ ರಾವ್ ಅವರ ಪುತ್ರ ಶ್ರೀ ಕೃಷ್ಣ ಜೆ. ರಾವ್ ಮದುವೆಯಾಗುವುದಾಗಿ ನಂಬಿಸಿ ತನ್ನ ಸಹಪಾಠಿ ವಿದ್ಯಾರ್ಥಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿ ಇದೀಗ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಸಂಜೆ ಸ್ಥಳ ಮಹಜರು ನಡೆಸಿದ್ದಾರೆ.
ಸಂತ್ರಸ್ತೆ ಆರೋಪಿಯು ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಬಪ್ಪಳಿಗೆಯ ಆತನ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದಾಗಿ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಆರೋಪಿಯ ಮನೆಯಲ್ಲಿ ಸಂತ್ರಸ್ತೆ, ಮಗು ಮತ್ತು ತಾಯಿ, ಆರೋಪಿಯ ಸಹೋದರಿ, ಓರ್ವ ಸಾಕ್ಷಿದಾರ ಹಾಗೂ ವಕೀಲೆಯ ಉಪಸ್ಥಿತಿಯೊಂದಿಗೆ ಸ್ಥಳ ಮಹಜರು ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.





