
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಆದೇಶ ಹೊರಡಿಸಿದೆ.
2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಘೋಷಿಸಿದ್ದು ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮಾಸಿಕ ಗೌರವಧನವನ್ನು 3,700 ರಿಂದ 4,700 ರೂ.ಗೆ ಮತ್ತು ಅಡುಗೆ ಸಹಾಯಕರಿಗೆ 3,600 ರೂ.ನಿಂದ 4,600 ರೂ.ಗೆ ಹೆಚ್ಚಳ ಮಾಡಿ ಗೌರವ ಸಂಭಾವನೆಯನ್ನು ನೇರ ನಗದು ವರ್ಗಾವಣೆ ವೇದಿಕೆ ಮೂಲಕವೇ ಪಾವತಿಸಲು ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ.



















