
ಕಾರ್ಕಳ: ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಮಾಡಲಾಗುತ್ತಿರುವ ಬದಲಾವಣೆಗಳು ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಬೃಹತ್ ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಂಡಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕರೆಯಂತೆ ನಡೆಯುತ್ತಿರುವ “ಮನ್‌ರೇಗಾ ಬಚಾವೋ ಸಂಗ್ರಾಮ್” ಅಭಿಯಾನದ ಭಾಗವಾಗಿ, ಜನವರಿ 31, 2026ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾರ್ಕಳದ ಕಾಂಗ್ರೆಸ್ ಕಚೇರಿಯಿಂದ ‘ಗಾಂಧಿ ನಡಿಗೆ’ ಆರಂಭವಾಗಿ ತಾಲೂಕು ಕಚೇರಿವರೆಗೆ ಮೆರವಣಿಗೆ ಸಾಗಲಿದೆ.
ಕೇಂದ್ರ ಬಿಜೆಪಿ ಸರ್ಕಾರವು ಉದ್ಯೋಗ ಖಾತರಿ ಯೋಜನೆಯ ಮೂಲ ಆಶಯವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಹಳೆಯ ಯೋಜನೆಯನ್ನು ಮರುಜಾರಿಗೊಳಿಸುವಂತೆ ಆಗ್ರಹಿಸಿದೆ.
ಉದಯ್ ಶೆಟ್ಟಿ ಮುನಿಯಾಲು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ನೇತೃತ್ವದ ಈ ಹೋರಾಟದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕಾರ್ಮಿಕರು ಭಾಗವಹಿಸಲಿದ್ದಾರೆ.



















