ಕಾಲ್ತುಳಿತ ಸಂಭವಿಸಿದ ಸ್ಥಳದಲ್ಲಿ ಸಕ್ರಿಯವಾಗಿದ್ದ ಸುಮಾರು 16 ಸಾವಿರ ಮೊಬೈಲ್ ಗಳಲ್ಲಿ ಬಹುತೇಕ ಸ್ವಿಚ್ ಆಫ್

ಪ್ರಯಾಗ್‌ರಾಜ್: ಜನವರಿ 29 ರಂದು ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ನಡೆದ ಕಾಲ್ತುಳಿತದಲ್ಲುಂಟಾದ ಅನೇಕ ಸಾವು ನೋವುಗಳ ಪ್ರಕರಣದ ಹಿಂದೆ ದೊಡ್ಡ ಸಂಚು ನಡೆದಿತ್ತಾ ಎಂಬ ಅನುಮಾನ ಮೂಡಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಾಲ್ತುಳಿತ ಸಂಭವಿಸಿದ ಸ್ಥಳದಲ್ಲಿ ಸಕ್ರಿಯವಾಗಿದ್ದ ಸುಮಾರು 16 ಸಾವಿರ ಮೊಬೈಲ್ ಫೋನ್‌ಗಳ ದತ್ತಾಂಶಗಳನ್ನು ವಿಶ್ಲೇಷಣೆ ಮಾಡಲಾಗುತ್ತಿದ್ದ ವೇಳೆ ಬಹುತೇಕ ಮೊಬೈಲ್ ಫೋನ್‌ಗಳು ಸ್ವಿಚ್ ಆಫ್ ಆಗಿರುವ ಸ್ಫೋಟಕ ವಿಚಾರ ಬಯಲಾಗಿದೆ. ಈಗ ತನಿಖಾಧಿಕಾರಿಗಳು ಸ್ವಿಚ್ ಆಫ್ ಆಗಿರುವ ಮೊಬೈಲ್ ಸಂಖ್ಯೆಗಳ ಗ್ರಾಹಕರ ಮಾಹಿತಿಯನ್ನು ಕಲೆ ಹಾಕುತ್ತಿದ್ದು ಜೊತೆಗೆ ಸಿಸಿಟಿವಿ ದೃಶ್ಯಗಳಿಂದ ಮುಖ ಗುರುತಿಸುವಿಕೆ ಅಪ್ಲಿಕೇಶನ್ ಮೂಲಕ ಶಂಕಿತರನ್ನು ಗುರುತಿಸಲಾಗುತ್ತಿದೆ ಎಂದು ತಿಳಿದುಬಂದಿದೆ.





















