27.3 C
Udupi
Thursday, April 30, 2026
spot_img
spot_img
HomeBlogಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವಿಸ್‌ ಹಾಗೂ ಉಪಮುಖ್ಯಮಂತ್ರಿ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ …!

ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವಿಸ್‌ ಹಾಗೂ ಉಪಮುಖ್ಯಮಂತ್ರಿ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ …!

ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್‌ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಅಲಂಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಇಂದೇ ಅಧಿಕೃತವಾಗಿ ಘೋಷಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಗಳಿಗೆ ಹಾಲಿ ಸಿಎಂ ಏಕನಾಥ್‌ ಶಿಂಧೆ ಅವರು ಈ ಬೇಡಿಕೆಯಿಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಗುರುವಾರ ರಾತ್ರಿ ಮಹಾಯುತಿ ನಾಯಕರ ಮಹತ್ವದ ಸಭೆ ನಡೆದಿದ್ದು ಮಹಾರಾಷ್ಟ್ರದ ನಿಯೋಜಿತ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಅಜಿತ್ ಪವಾರ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮೊದಲಾದ ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಮುಂಬೈನಲ್ಲಿ ಮತ್ತೊಂದು ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿದ್ದು ಫಡ್ನವಿಸ್ ಮತ್ತು ಅಜಿತ್ ಪವಾರ್ ಮುಂಬೈಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page