
ಮಂಗಳೂರು: ಸೆ.18 ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ಶೆಟ್ಟಿ ತಿಮರೋಡಿಯನ್ನು 2025 ರ ಸೆ.18 ರಿಂದ 2026ರ ಸೆ.17 ರ ವರೆಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶಿಸಿದ್ದರು. ಇದೀಗ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಅ.8ಕ್ಕೆ ಮುಂದೂಡಿದೆ.
ತಿಮರೋಡಿ ಅವರು ಗಡಿಪಾರು ಆದೇಶ ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದೆ.



















