
ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಮೇಲೆ 32 ಪ್ರಕರಣಗಳು ದಾಖಲಾಗಿದ್ದು, ವಿವಿಧ ಕಾನೂನು ಉಲ್ಲಂಘನೆ ಅಶಾಂತಿ ಸೃಷ್ಟಿ ಹಾಗೂ ಸಮಾಜದಲ್ಲಿ ಅಸ್ಥಿರತೆ ಉಂಟುಮಾಡುವ ಚಟುವಟಿಕೆಗಳಲ್ಲಿ ಭಾಗಿಯಾದ ಕಾರಣ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಆದೇಶ ಹೊರಡಿಸಿದ್ದಾರೆ.
ಧರ್ಮಸ್ಥಳ ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಪ್ರಕರಣಗಳಲ್ಲಿ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿಯಾಗಿದ್ದ ಚೆನ್ನಯ್ಯನಿಗೆ ಆಶ್ರಯ ನೀಡಿದ ಆರೋಪವೂ ಇದೆ. ಇನ್ನು ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.






















































