
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಘೋಷಿಸಿರುವ ಶೋಕಾಚರಣೆ ಹಿನ್ನೆಲೆಯಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ, ಹೊಸ ವರ್ಷಾಚರಣೆಗೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸರ್ಕಾರ ಏಳು ದಿನ ಶೋಕಾಚಾರಣೆ ಘೋಷಣೆ ಮಾಡಿದ್ದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ತಡೆ ಹಿಡಿಯಲಾಗಿದೆ ಹೊರತು ಖಾಸಗಿ ಕಾರ್ಯ ಕ್ರಮಗಳಲ್ಲಿ ಹಸ್ತಕ್ಷೇಪ ಮಾಡಲ್ಲ, ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಬಹುದು. ಹೊಸ ವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.
ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಯಾರೊಬ್ಬರೂ ಕೆಟ್ಟದಾಗಿ ವರ್ತಿಸುವಂತಿಲ್ಲ. ಅನುಚಿತ ವರ್ತನೆ, ಕಾನೂನು ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.



