
ಮಾಜಿ ಶಾಸಕ ಮೋಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ (52) ನಾಪತ್ತೆಯಾಗಿದ್ದು ಇವರ ಕಾರು ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ .
ಇವರು ಬೆಳಿಗ್ಗೆ ಮೂರು ಗಂಟೆಗೆ ಮನೆಯಿಂದ ಹೊರಟಿದ್ದು, ಇವರ ಕಾರು 6 ಗಂಟೆಯ ವೇಳೆಗೆ ಕೂಳೂರು ಸೇತುವೆ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.













