
ಬೆಂಗಳೂರು/ಧಾರವಾಡ: ಇಂದು ಧಾರವಾಡ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನ್ಯಾಯಪೀಠವು ಮುಡಾ ಹಗರಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಸಿಬಿಐ ತನಿಖೆಯ ಕುಣಿಕೆಯಿಂದ ಪಾರಾಗಿದ್ದಾರೆ.
ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಅಲ್ಲ ಎಂದು ಹೇಳಲು ಆಗಲ್ಲ. ಲೋಕಾಯುಕ್ತ ಪೊಲೀಸ್ ತನಿಖೆಯಲ್ಲಿ ತಾರತಮ್ಯ ಇದೆ ಎಂದು ಹೇಳಲು ಆಧಾರ ಇಲ್ಲ. ಅದೊಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾ ತನಿಖೆ ಅಸಮರ್ಪಕ ಅಲ್ಲ ಎಂದು ಹೇಳಲು ಆಗಲ್ಲ. ಹೀಗಾಗಿ, ಸಿಬಿಐಗೆ ಈ ಪ್ರಕರಣವನ್ನು ಕೊಡಲು ಹೈಕೋರ್ಟ್ ನಿರಾಕರಿಸಿದೆ.





















