
ಮೈಸೂರು: ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮುಡಾದಲ್ಲಿ 50:50 ಅನುಪಾತದ ಸೈಟು ಹಂಚಿಕೆಯಲ್ಲಿ ಹಗರಣ ಆಗಿದೆ. ಮೇಲ್ನೋಟಕ್ಕೆ ಹಗರಣದ ಆಗಿದೆ ಎಂದು ಎಲ್ಲರೂ ಮಾತನಾಡುತ್ತಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದು ಹೇಳಿದ್ದಾರೆ.ಸಿಎಂ ವರ್ಚಸ್ಸಿಗೆ ಧಕ್ಕೆ ತಂದು ಅಧಿಕಾರಕ್ಕೆ ಬರುವುದೇ ಬಿಜೆಪಿಯ ಮುಖ್ಯ ಗುರಿ. ಅದಕ್ಕಾಗಿ ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು ಕೊಲ್ಲುವ ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಿ, ಅವರ ಹೆಸರಿಗೆ ಮಸಿ ಬಳಿಯುವ ಯತ್ನದಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮುಡಾ ವಿಚಾರಕ್ಕೆ ಮುಡಾ ಸಮಾವೇಶ ಮಾಡಲಾಗಿದ್ದು ಹೀಗಾಗಿ ಹಾಸನದಲ್ಲಿ ಜನಾಂದೋಲನ ಸಮಾವೇಶ ಮಾಡುತ್ತಿದ್ದೇವೆ ಅಷ್ಟೇ. ಇಡಿ ತನಿಖೆಯಲ್ಲಿ ತಂದೆಯ ಆರೋಪದ ಮೇಲೆ ವಿಚಾರಣೆ ನಡೆಯುತ್ತಿಲ್ಲ. ಇಡಿಗೆ ವಿಚಾರಣೆ ಮಾಡುವ ಹಕ್ಕು ಇಲ್ಲ. ಇದರಲ್ಲಿ ಸತ್ಯ ಏನು ಇಲ್ಲ ಅಂಥ ಎಲ್ಲರಿಗೂ ಗೊತ್ತಿದೆ. ಆರ್‌ಟಿಐ ಕಾರ್ಯಕರ್ತ ಮಾಡಿರುವ ಆರೋಪದಲ್ಲಿ ಸತ್ಯ ಇಲ್ಲ. ಪ್ರತಿಪಕ್ಷಗಳು ನಮ್ಮ ನಿರುತ್ಸಾಹಗೊಳಿಸಲು ಯತ್ನಿಸುತ್ತಿದ್ದಾರೆ. ಅಧಿಕಾರದ ಹಪಹಪಿಯಿಂದ ಏನು ಬೇಕಾದರೂ ಮಾಡುತ್ತಾರೆ. ನಮಗೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಪ್ರತ್ಯೇಕ ಆಯೋಗದ ಮೂಲಕ ಮುಡಾ ತನಿಖೆ ಮಾಡಿಸುತ್ತಿದ್ದೇವೆ ಎಂದು ಹೇಳಿದರು.



















