
ಹೆಬ್ರಿ :ಕನ್ನಡ ನಾಡಿನ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರನಾಗಿ ಬೆಂಗಳೂರಿನ ಅಭಿವೃದ್ಧಿಗೆ ಬಹು ದೊಡ್ಡ ಕೊಡುಗೆ ನೀಡಿದ ನಾಡಪ್ರಭು ಕೆಂಪೇಗೌಡರ ಸಾಧನೆ ನಮಗೆಲ್ಲರಿಗೂ ಪ್ರೇರಣಾದಾಯಕವಾಗಿದೆ. ಅವರು ರಾಜನೀತಿ, ಸಮರಕಲೆ ಹಾಗೂ ಆಡಳಿತ ದಲ್ಲಿ ಬಹಳಷ್ಟು ಆಸಕ್ತಿಯನ್ನು ಹೊಂದಿದ್ದರು.ಅವರ ಸಾಧನೆಗಳು ಕೇವಲ ನಗರ ನಿರ್ಮಾಣಕ್ಕೆ ಸೀಮಿತವಾಗಿರದೆ ಸಾಮಾಜಿಕ, ಆರ್ಥಿಕ, ಧಾರ್ಮಿಕ, ವಾಣಿಜ್ಯ, ನೀರಾ ವರಿ, ಸಾಂಸ್ಕೃತಿಕ ಹಾಗೂ ರಕ್ಷಣಾ ಕ್ಷೇತ್ರಗಳಿಗೂ ಆದ್ಯತೆಯನ್ನು ನೀಡುವ ಮೂಲಕ ಸಮಾಜದ ಪ್ರಗತಿಗೆ ಅಮೂಲ್ಯ ಕೊಡುಗೆಯನ್ನು ನೀಡಿದ ಮಹಾನ್ ಸಾಧಕರಾಗಿದ್ದಾರೆ ಎಂದು ಮುದ್ರಾಡಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಭಟ್ ಹೇಳಿದರು.
ಅವರು ತಮ್ಮ ಶಾಲೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಜೀವನ ಸಾಧನೆಗಳ ಕುರಿತು ಮಾತನಾಡಿದರು.ಶಾಲಾ ಶಿಕ್ಷಕರಾದ ಮಹೇಶ್ ನಾಯ್ಕ್, ಪಿ. ವಿ. ಆನಂದ, ಶ್ಯಾಮಲಾ ಕೊಠಾರಿ, ರಘುಪತಿ ಹೆಬ್ಬಾರ್, ಶ್ಯಾಮಲಾ ಕೊಠಾರಿ, ಚಂದ್ರಕಾಂತಿ ಹೆಗ್ಡೆ, ವಿದ್ಯಾರ್ಥಿ ನಾಯಕ ಕಾರ್ತಿಕ್ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು









