
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗವು ಅವಶ್ಯಕ. ದಿನನಿತ್ಯವೂ ಯೋಗಾಸನವನ್ನು ಮಾಡುವ ಮೂಲಕ ಆರೋಗ್ಯವಂತರಾಗಿ ಬಾಳೋಣ. ವಿದ್ಯಾರ್ಥಿಗಳು ಯೋಗಭ್ಯಾಸವನ್ನು ಪ್ರತಿನಿತ್ಯ ಮಾಡುವುದರಿಂದ ಏಕಾಗ್ರತೆ ಹೆಚ್ಚಳವಾಗಿ ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಕಲಿಕೆಯಲ್ಲೂ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಪೂಜಾರಿ ಹೇಳಿದರು.
ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಯೋಗಾಸನ ಸ್ಪರ್ಧೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕಾರ್ಕಳ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವಿಚಂದ್ರ ಕಾರಂತ, ಆಡಳಿತ ಮಂಡಳಿಯ ಖಜಾಂಚಿಗಳು, ಜನಪ್ರಿಯ ವೈದ್ಯರಾದ ಡಾ. ಎಂ. ಎಸ್. ರಾವ್, ಕಾರ್ಕಳ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ಎಂ.ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಮಾರಂಭದಲ್ಲಿ ಕಾರ್ಕಳ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಂತೋಷ ಶೆಟ್ಟಿ, ಕಾರ್ಕಳ ತಾಲೂಕು ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪಾಂಡುರಂಗ ಆಚಾರ್ಯ, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ವೀಣಾ ಎಸ್.ಕಾರ್ಕಳ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಮಹೇಶ್ ನಾಯ್ಕ್ , ರಕ್ಷಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಸುರೇಶ್ ಕುಲಾಲ್, ಅಂತಾರಾಷ್ಟ್ರೀಯ ಯೋಗ ಗುರುಗಳಾದ ನರೇಂದ್ರ ಕಾಮತ್, ರಕ್ಷಕ ಶಿಕ್ಷಕ ಸಮಿತಿ ಸದಸ್ಯೆ ಸುಮತಿ ಭಟ್,ಯೋಗ ತೀರ್ಪುಗಾರರು ಉಪಸ್ಥಿತರಿದ್ದರು.ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಬಾಯರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಘುಪತಿ ಹೆಬ್ಬಾರ್ ವಂದಿಸಿದರು. ಆಂಗ್ಲ ಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಬಾಯರಿ ವಹಿಸಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮುದ್ರಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಮ್ಯಾಕಾಂತಿ, ಪಂಚಾಯತ್ ಹಿರಿಯ ಸದಸ್ಯರಾದ ಗಣಪತಿ ಎಂ., ಸದಸ್ಯರಾದ ಸನತ್ ಕುಮಾರ್ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿದರು.ಅಂತರಾಷ್ಟ್ರೀಯ ಯೋಗ ಗುರು ನರೇಂದ್ರ ಕಾಮತ್ ರವರ ಮಾರ್ಗದರ್ಶನದಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಯೋಗ ಶಿಕ್ಷಕರ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ದೈಹಿಕ ಶಿಕ್ಷಣ ಶಿಕ್ಷಕರಾದ ರಘುಪತಿ ಹೆಬ್ಬಾರ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕಿ ಶ್ಯಾಮಲಾ ಕೊಠಾರಿ ಸ್ವಾಗತಿಸಿ, ಪಿ. ವಿ. ಆನಂದ್ ಕಾರ್ಯಕ್ರಮ ನಿರೂಪಿಸಿ , ಮಹೇಶ್ ನಾಯ್ಕ್ ವಂದಿಸಿದರು.













