ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಟಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲಿನಿಂದ ಪ್ರವಾಸಕ್ಕೆ ಬಂದಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿನಿಯರು ಬುಧವಾರ ಸಂಜೆ ಕಡಲಿನಲ್ಲಿ ಆಟವಾಡಲು ಇಳಿದಿದ್ದು ಈ ವೇಳೆ ಅಲೆಗಳ ಹೊಡೆತಕ್ಕೆ ಏಳು ವಿದ್ಯಾರ್ಥಿನಿಯರು ನೀರುಪಾಲಾದ ಘಟನೆ ನಡೆದಿದೆ.
ಈ ಪೈಕಿ ಓರ್ವ ವಿದ್ಯಾರ್ಥಿನಿ ಸಾವು ಕಂಡರೇ ಮೂವರು ಕಾಣೆಯಾಗಿದ್ದು, ಮೂರು ಜನ ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಲೈಫ್‌ಗಾರ್ಡ್ಗಳು ಯಾವುದೇ ಪರಿಕರ ಸಾಧನ ಇಲ್ಲದಿದ್ದರೂ ಮೂರು ಜನ ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿದ್ದು ಓರ್ವ ವಿದ್ಯಾರ್ಥಿನಿ ಸಾವು ಕಂಡರೇ ಇನ್ನೂ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶಾವಂತಿ (15) ಸಾವು ಕಂಡ ವಿದ್ಯಾರ್ಥಿನಿಯಾಗಿದ್ದು ಮುಳಬಾಗಿಲಿನ ಯಶೋಧ, ವೀಕ್ಷಣಾ , ಲಿಪಿಕಾ ರಕ್ಷಣೆಗೊಳಗಾದವರಾಗಿದ್ದು ಇವರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಮೂವರಿಗೂ ಭಟ್ಕಳ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ದೀಕ್ಷ, ಲಾವಣ್ಯ, ವಂದನಾ ಸಮುದ್ರದಲ್ಲಿ ಕಾಣೆಯಾದ ವಿದ್ಯಾರ್ಥಿನಿಯರಾಗಿದ್ದು ಶೋಧ ಕಾರ್ಯ ಮುಂದುವರಿದಿದೆ. ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.