
ಬೆಂಗಳೂರು: ರಾಜ್ಯದಲ್ಲಿ ಸುದ್ದಿಯಲ್ಲಿರುವ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಜೆಡಿಎಸ್ ಮೈತ್ರಿಕೂಟ ಆಗಸ್ಟ್ ಮೂರರಿಂದ ಸಿಎಂ ರಾಜೀನಾಮೆಗೆ ಒತ್ತಾಯಿಸಿ, ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ.
ಭಾನುವಾರ ನಡೆದ ಜಂಟಿ ಸಭೆಯಲ್ಲಿ, ಈ ತೀರ್ಮಾನ ಕೈಗೊಂಡಿದ್ದು ಆ. 3 ಶನಿವಾರದಂದು ನೈಸ್ ರಸ್ತೆಯಿಂದ ಪಾದಯಾತ್ರೆ ಆರಂಭವಾಗಲಿದೆ ,ಬಿ.ಎಸ್ ಯಡಿಯೂರಪ್ಪ ಹಾಗೂ ಎಚ್ ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಸುಮಾರು ಒಂದು ವಾರಗಳ ಕಾಲ ಪಾದಯಾತ್ರೆ ನಡೆಯಲಿದ್ದು, ರಾಜ್ಯದ ಭ್ರಷ್ಟ ಸರಕಾರದ ವಿರುದ್ಧ,ಮೂಡಾ , ವಾಲ್ಮೀಕಿ ನಿಗಮ ಹಗರಣ, ಎಸ್ಸಿ ಎಸ್ಟಿ ಹಣ ದುರ್ಬಳಕೆ ವಿಚಾರದ ಕುರಿತು ಪಾದಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.











