30 C
Udupi
Tuesday, March 17, 2026
spot_img
spot_img
HomeBlogಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ತನಿಖೆಗೆ ಆದೇಶ

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ತನಿಖೆಗೆ ಆದೇಶ

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಹಿನ್ನೆಲೆ ತನಿಖೆ ನಡೆಸಿ ವರದಿ ಸಲ್ಲಿಸಲು ಪಣಂಬೂರು ಉಪವಿಭಾಗದ ಎಸಿಪಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

ಹಣ ವಂಚನೆ ಪ್ರಕರಣದಲ್ಲಿ ಬಂಧಿತನಾದ ವ್ಯಕ್ತಿಯ ಪತ್ನಿಗೆ ಲೈಂಗಿಕವಾಗಿ ಸಹಕರಿಸದಿದ್ದರೆ ಪತಿಯನ್ನು ಬಿಡುಗಡೆ ಮಾಡುವುದಿಲ್ಲ, 25 ಲಕ್ಷ ರೂ. ನೀಡಿದರೆ ಪ್ರಕರಣದಿಂದ ಬಿಡಿಸುವುದಾಗಿ ಇನ್‌ಸ್ಪೆಕ್ಟರ್ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ. ಈ ವಿಷಯ ವೈರಲ್ ಆದ ಬಳಿಕ ರಾಜ್ಯ ಮಹಿಳಾ ಆಯೋಗವೂ ಗಮನಿಸಿ ಕ್ರಮಕ್ಕೆ ಸೂಚನೆ ನೀಡಿದೆ.

ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿ, ಈ ಬಗ್ಗೆ ಯಾವುದೇ ಅಧಿಕೃತ ದೂರು ಲಭ್ಯವಾಗಿಲ್ಲ. ಆದರೆ ಆರೋಪಗಳ ಹಿನ್ನೆಲೆಯಲ್ಲಿ ಎಸಿಪಿ ಶ್ರೀಕಾಂತ್ ಅವರಿಗೆ ತನಿಖೆ ನಡೆಸಲು ಸೂಚಿಸಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಮಹಿಳೆ ಹಾಗೂ ಆಕೆಯ ಸಹೋದರಿ ನಡುವಿನ ವೈಯಕ್ತಿಕ ಮನಸ್ತಾಪವಿದ್ದು ಈ ಪ್ರಕರಣದಲ್ಲಿ ಪೊಲೀಸ್ ನಿರೀಕ್ಷಕರು ಪಕ್ಕಪಾತ ಎಸಗಿ ಆಕೆಯ ಸಹೋದರಿ ಪರ ನಿಂತಿದ್ದರು ಎಂದು ದೂರದಾರ ಮಹಿಳೆ ಆರೋಪಿಸಿದ್ದಾರೆ.

ತನ್ನನ್ನು ಭೇಟಿಯಾದ ಮಹಿಳೆಯು ಪೊಲೀಸ್ ನಿರೀಕ್ಷಕರು ತಡೆಗೋಡೆ ಹಾಕಿರುವ ವಿಡಿಯೋ ಒಂದನ್ನು ತೋರಿಸಿದ್ದು ಆದರೆ, ಆ ಮಹಿಳೆ ದೂರು ನೀಡದ ಹೋರತು ಈ ಬಗ್ಗೆ ಕ್ರಮ ವಹಿಸಲು ಸಾಧ್ಯವಿಲ್ಲ. ಮಹಿಳೆ ಯಾವುದೇ ಆಡಿಯೋ ದಾವೆಗಳನ್ನು ನೀಡಿಲ್ಲ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page