
ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಯಾದಗಿರಿ ಪಿಎಸ್ಐ ಸಾವು ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಈ ವೇಳೆ ಮೃತ ಪಿಎಸ್ಐ ಪರಶುರಾಮ್ ಪತ್ನಿಗೆ ಸರ್ಕಾರದಿಂದ ಉದ್ಯೋಗ ನೀಡುತ್ತೇವೆ ಎಂದು ಘೋಷಿಸಿದ್ದಾರೆ.ಪಿಎಸ್ಐ ಸಾವು ಪ್ರಕರಣ ಸಿಐಡಿಗೆ ನೀಡಲಾಗಿದ್ದು ಅದರ ತನಿಖೆ ಮಾಡುತ್ತಿದ್ದಾರೆ.
ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡುತ್ತಿದ್ದು ಅದು ಬಂದ ಮೇಲೆ ಯಾಕೆ ಸಾವಾಗಿದೆ ಎಂದು ಗೊತ್ತಾಗುತ್ತದೆ. ನಾನು ನಾಡಿದ್ದು ಅವರ ಮನೆಗೆ ಹೋಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರ ಶ್ರೀಮತಿಗೆ ಕೆಲಸ ಕೊಡಬೇಕು ಎಂದು ನಾವು ತೀರ್ಮಾನ ಮಾಡಿದ್ದೇವೆ. ಅವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವ ಕೆಲಸ ಮಾಡುತ್ತೇವೆ. ಉದ್ಯೋಗ ಕೊಡಲು ಸಿಎಂ ಮತ್ತು ನಾನು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.













