
ಬೀದರ್: ಶನಿವಾರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗರೊಂದಿಗೆ ಮಾತನಾಡಿ ಗೃಹಲಕ್ಷ್ಮಿ ಯೋಜನೆಗೆ ಹಣಕಾಸಿನ ಸಮಸ್ಯೆ ಇಲ್ಲ. ಮೇ ತಿಂಗಳ ಹಣವನ್ನು ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.
“ಅಕ್ಕ ಪಡೆ” ವಿಚಾರವಾಗಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳೆಯರ ಸುರಕ್ಷೆಗಾಗಿ ಬೀದರ್ ಜಿಲ್ಲಾ ಪೊಲೀಸ್ ಇಲಾಖೆ ಸ್ಥಾಪಿಸಿರುವ “ಅಕ್ಕ ಪಡೆ” ಮಾದರಿಯನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ನಮ್ಮ ಇಲಾಖೆಯು ಅಕ್ಕ ಪಡೆಯ ಕೆಲಸವನ್ನು ಶ್ಲಾಘಿಸುತ್ತದೆ. ಶೀಘ್ರವೇ ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಎಸ್ ಪಿ ಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಈ ಮಾದರಿಯನ್ನು ವಿಸ್ತರಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.