
ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಹೇಳಿದ್ದಾರೆ.
ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ. ಇದಕ್ಕಾಗಿ ಫೈನ್ ಮತ್ತು ಶಿಕ್ಷೆ ಎರಡನ್ನೂ ಜಾಸ್ತಿ ಮಾಡಿದ್ದೇವೆ. 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ಕೂಡಾ 5 ಲಕ್ಷ ಮಾಡಿದ್ದೇವೆ. ರಾಜ್ಯಪಾಲರಿಗೆ ಬಿಲ್ ಕಳುಹಿಸಿದ್ದು ಅವರು ನೋಡಿ ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ ಎಂದು ಹೇಳಿದರು.





















