
ಮೈಸೂರು: ಶ ಕೇಂದ್ರ ಸಚಿವ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ ಮೈಕ್ರೋಫೈನಾನ್ಸ್ ಯಾವುದೇ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ. ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಈ ಸಮಸ್ಯೆಯಿಂದ ಜನರು ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಮೈಕ್ರೋಫೈನಾನ್ಸ್ ನವರು ಜನ ಸಾಮಾನ್ಯರ ಮೇಲೆ ಕಿರುಕುಳ ಕೊಡುತ್ತಿದ್ದು ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಜನರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ. ಅದರ ವಿರುದ್ಧ ಯಾವ ರೀತಿ ಕಡಿವಾಣ ಹಾಕಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.





















