
ಮೈಸೂರು: ದಸರಾ ಪ್ರಯುಕ್ತ ಕಲಬುರಗಿಯಿಂದ ಬಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಬಲೂನು ಮಾರುತಿದ್ದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಕೊಳ್ಳೇಗಾಲದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ದುಷ್ಕೃತ್ಯ ಎಸಗಿದ್ದ ಕಾಮುಕ ಮೈಸೂರಿನ ಖಾಸಗಿ ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಹೋಗಿದ್ದು ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ತನಿಖೆ ನಡೆಸುತ್ತಿದ್ದ ಪೊಲೀಸರು ಕೊಳ್ಳೇಗಾಲದಲ್ಲಿ ಆರೋಪಿಯನ್ನು ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.
ಆರೋಪಿಯನ್ನು ಬಂಧಿಸಿ ಮೈಸೂರಿಗೆ ಕರೆತರುವಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಕರೆತಂದು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಘಟನೆ ಹಿನ್ನೆಲೆ:
ಸಾಂಸ್ಕೃತಿಕ ನಗರದಲ್ಲಿ 10 ವರ್ಷದ ಬಾಲಕಿ ಮೇಲೆ ಶವ ಪತ್ತೆಯಾಗಿದ್ದು ಬಾಲಕಿಯ ದೇಹದ ಮೇಲೆ ಬಟ್ಟೆಯು ಇಲ್ಲದೆ ಶವ ಬಿದ್ದಿರುವ ಹಿನ್ನೆಲೆಯಲ್ಲಿ ಆರಂಭಿಕವಾಗಿ ಇದನ್ನು ಪೊಲೀಸರು ರೇಪ್ ಅಂಡ್ ಮರ್ಡರ್ ಇರಬಹುದು ಎಂದು ಶಂಕಿಸಿದ್ದರು. ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬ ಬಂದಿದ್ದು ನಿನ್ನೆ ರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಅಪ್ರಾಪ್ತ ಬಾಲಕಿ ಮರ್ಡರ್ ಆಗಿದೆ.






















































