31.4 C
Udupi
Sunday, April 26, 2026
spot_img
spot_img
HomeBlogಮೈಸೂರು ದಸರಾ,ಇಂದು ವಿಶ್ವವಿಖ್ಯಾತ ಜಂಬೂ ಸವಾರಿ…

ಮೈಸೂರು ದಸರಾ,ಇಂದು ವಿಶ್ವವಿಖ್ಯಾತ ಜಂಬೂ ಸವಾರಿ…

ಮೈಸೂರು: ಇಂದು ಅರಮನೆ ನಗರಿ ಮೈಸೂರಿನಲ್ಲಿ ವಿಜಯದಶಮಿ ನಿಮಿತ್ತ ಜಂಬೂಸವಾರಿ ನಡೆಯಲಿದ್ದು 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಸಾಗಲಿದ್ದಾನೆ.

ಬೆಳಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸುತ್ತದೆ. ನಂತರ 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉತ್ತರ ಪೂಜೆ ಮಾಡಲಿದ್ದಾರೆ. ಈ ವೇಳೆ ಅರಮನೆಗೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಸವಾರಿ ತೊಟ್ಟಿಗೆ ಆಗಮಿಸಲಿವೆ. ಬಳಿಕ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ 10.45ರಿಂದ ಬೆಳಗ್ಗೆ 11ರೊಳಗೆ ಜಟ್ಟಿ ಕಾಳಗ ನಡೆಯುತ್ತದೆ.

ನಂತರ 11.20 ರಿಂದ 11.45ರವರೆಗೆ ಅರಮನೆ ಅಂಗಳದ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ಸಾಗುತ್ತದೆ. ಇಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬನ್ನಿಪೂಜೆ ನೆರವೇರಿಸುತ್ತಾರೆ. ನಂತರ ಅರಮನೆಗೆ ಆಗಮಿಸಿ ಕಂಕಣ ವಿಸರ್ಜನೆ ಮಾಡುತ್ತಾರೆ.

ಮಧ್ಯಾಹ್ನ ಶುಭ ಮಕರ‌ ಲಗ್ನದಲ್ಲಿ 1.41ರಿಂದ 2.10ರ ನಡುವೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಾಗುತ್ತದೆ. ಬಳಿಕ ಸಂಜೆ ಕುಂಭ ಲಗ್ನ 4 ರಿಂದ 4.30ರ ನಡುವೆ ಜಂಬೂಸವಾರಿಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಇಂದು ವಿಶ್ವವಿಖ್ಯತ ಜಂಬೂಸವಾರಿ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ಬಾರಿಯ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಮಾಡಲಾಗಿದೆ. ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ದಸರಾ ಮಹೋತ್ಸವಕ್ಕೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರುವ ನಾಲ್ಕ ಸಾವಿರಕ್ಕೂ ಹೆಚ್ಚು ಪೊಲೀಸರು ಕಾವಲು ಇದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗ ಸೇರಿದಂತೆ ಆಯಕಟ್ಟಿನ ಜನನಿಬಿಡ ಸ್ಥಳದಲ್ಲಿ ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page