25.6 C
Udupi
Sunday, April 5, 2026
spot_img
spot_img
HomeBlogಮೊಂಥಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

ಮೊಂಥಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

spot_imgspot_img

ನವದೆಹಲಿ: ಮೊಂಥಾ ಚಂಡಮಾರುತ ಅಪ್ಪಳಿಸಿದ ಪರಿಣಾಮದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಭಾರತೀಯ ರೈಲ್ವೇಯ 100ಕ್ಕೂ ಅಧಿಕ ರೈಲುಗಳ ಜೊತೆಗೆ 30ಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿವೆ.

ಇದಲ್ಲದೆ ಹಲವಾರು ರೈಲುಗಳ ಮಾರ್ಗದಲ್ಲಿಯೂ ಬದಲಾವಣೆ ಮಾಡಿದ್ದು, ಕೆಲವು ರೈಲುಗಳ ಸಮಯವನ್ನು ಮರುನಿಗದಿಪಡಿಸಿದೆ. ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಾದ ಕಾಕಿನಾಡ, ಭೀಮಾವರಂ, ವಿಜಯವಾಡ, ರಾಜಮಂಡ್ರಿ ಮತ್ತು ವಿಶಾಖಪಟ್ಟಣಂ ಕಡೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ ಭಾರತೀಯ ರೈಲ್ವೆ ಇಲಾಖೆಯು ಈ ನಿರ್ಧಾರ ಕೈಗೊಂಡಿದೆ. ಜೊತೆಗೆ ಪ್ರಯಾಣಿಕರು ರೈಲು ನಿಲ್ದಾಣಕ್ಕೆ ತೆರಳುವ ಮುನ್ನ ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್, ಐಆರ್‌ಸಿಟಿಸಿ ಮೂಲಕ ಅಪ್‌ಡೇಟ್‌ಗಳನ್ನು ತಿಳಿದುಕೊಳ್ಳಿ ಹಾಗೂ ರದ್ದಾದ ಎಲ್ಲಾ ರೈಲುಗಳ ಪೂರ್ಣ ಮರುಪಾವತಿ ನೀಡಲಾಗುವುದು ಎಂದು ತಿಳಿಸಿದೆ.

ಆಂಧ್ರ ಪ್ರದೇಶದಲ್ಲಿ 30ಕ್ಕೂ ಹೆಚ್ಚು ಫ್ಲೈಟ್‌ಗಳ ಹಾರಾಟ ರದ್ದಾಗಿದ್ದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಆಂಧ್ರಪ್ರದೇಶದ ಹಲವು ನಗರಗಳ ನಡುವಿನ ವಿಮಾನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಒಟ್ಟು 35 ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, ಶಂಷಾಬಾದ್‌ನಿಂದ 17 ನಿರ್ಗಮನಗಳು ಮತ್ತು ವಿಶಾಖಪಟ್ಟಣ, ವಿಜಯವಾಡ ಮತ್ತು ರಾಜಮಂಡ್ರಿಯಿಂದ 18 ಆಗಮನಗಳು ಬಂದ್ ಮಾಡಲಾಗಿದ್ದು, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದುಗೊಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page