
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಗಳ ಅಧಿಕಾರ ತ್ಯಾಗದ ಬಗ್ಗೆ ವೈರಾಗ್ಯದ ಹೇಳಿಕೆ ಕುರಿತು ಮಾತನಾಡಿ ಸಿ.ಎಂ. ಮಾತುಗಳನ್ನು ಸಮರ್ಥಿಸಿಕೊಂಡಿರುವ ಅವರು, ‘ಯಾರಿಗೂ ಅಧಿಕಾರ ಶಾಶ್ವತವಲ್ಲ’ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದಲ್ಲ, ಆದರೆ ‘ಮೂವತ್ತು ತಿಂಗಳ ನಂತರವಾದರೂ ಬಿಡಬಹುದು, ಅದಕ್ಕೂ ಮೊದಲೇ ಬಿಡಬಹುದು. ಬಿಡುವುದಂತೂ ಪಕ್ಕಾ. ಯಾವಾಗಲಾದ್ರೂ ಬಿಡಲೇಬೇಕು’ ಎಂದಿದ್ದಾರೆ.
ಮುಖ್ಯಮಂತ್ರಿ ಸ್ಥಾನದ ಬಗ್ಗೆ ಎಲ್ಲಾ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಪಕ್ಷದಲ್ಲಿ ಒಳ್ಳೆಯ ವಾತಾವರಣ ಇರಬೇಕು ಎಂದು ಕಾರ್ಯಕರ್ತರು ಬಯಸುತ್ತಾರೆ ಎಂದು ಹೇಳಿದರು.





