
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು ಈ ವೇಳೆ ವಿನಯ್ ಗುರೂಜಿ ಭವಿಷ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ‘ನಮ್ಮ ಸರ್ಕಾರ ಸುಭದ್ರವಾಗಿದೆ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಕೆಲಸ ಮಾಡ್ತಿದ್ದಾರೆ. ಯಾವ ಸ್ವಾಮೀಜಿ, ಗುರೂಜಿಗಳು ಭವಿಷ್ಯ ನುಡಿಯೋದು ಬೇಕಿಲ್ಲ’ ಎಂದು ಹೇಳಿದ್ದಾರೆ.
ನಾನು ಎಲ್ಲಾ ಸ್ವಾಮೀಜಿ, ಗುರೂಜಿಗಳಿಗೆ ವಿನಂತಿ ಮಾಡ್ತೀನಿ. ನಮ್ಮ ಸರ್ಕಾರದ ವಿಚಾರದಲ್ಲಿ ತಮ್ಮ ಯಾವ ಹೇಳಿಕೆ ಬೇಡ. ನಮ್ಮ ಸರ್ಕಾರ ಸುಭದ್ರವಾಗಿ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಕೆಲಸ ಮಾಡ್ತಿದ್ದಾರೆ. ಅವರ ನೇತೃತ್ವದಲ್ಲಿ ನಾವೆಲ್ಲ ಒಟ್ಟಿಗೆ ಕೆಲಸ ಮಾಡ್ತಿದ್ದೇವೆ. ಯಾರೂ ಭವಿಷ್ಯ ನುಡಿಯೋದು ಬೇಕಿಲ್ಲ ಎಂದು ಹೇಳಿದರು.



















