30 C
Udupi
Tuesday, March 17, 2026
spot_img
spot_img
HomeBlog"ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ" : 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಮಾತು

“ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ” : 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಮಾತು

ವಿಶಾಖಪಟ್ಟಣಂ: ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ‘1 ಭೂಮಿ, 1 ಆರೋಗ್ಯಕ್ಕಾಗಿ ಯೋಗ’ ಶೀರ್ಷಿಕೆಯಡಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ “ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಯೋಗ ಅಂದರೆ ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಯೋಗ” ಎಂದು ಹೇಳಿದರು.

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್‌.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ. ಉದ್ದದ ಕಾರಿಡಾರ್ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಏಕಕಾಲದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಯೋಗ ಮಾಡಿದರು.

ಪ್ರಧಾನಿ ಮೋದಿ ದೇಶದ ಜನತೆಗೆ ಯೋಗ ದಿನಾಚರಣೆಯ ಶುಭಾಶಯ ತಿಳಿಸಿ ಮಾತನಾಡಿದ್ದು ಇಂದು 175 ದೇಶಗಳು ಯೋಗ ದಿನ ಆಚರಣೆ ಮಾಡುತ್ತಿವೆ. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಲು ಯೋಗ ನೆರವಾಗಲಿದೆ. ಯೋಗ ಎಂದರೆ ಎಲ್ಲರೂ ಒಂದಾಗುವುದು ಎಂದರ್ಥ. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಮನುಷ್ಯ ಶಿಸ್ತುಬದ್ಧ ಜೀವನ ನಡೆಸಲು ಯೋಗ ಸಹಕಾರಿಯಾಗಲಿದೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page