ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಾರ್ಕಳ: ಯೋಗಾಭ್ಯಾಸವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಕಾರ್ಕಳದ ಪತಂಜಲಿ ಯೋಗ ಸಮಿತಿಯ ಯೋಗ ತರಬೇತುದಾರ ಉದಯ ಕುಮಾರ್ ಕಡಂಬ ಅಭಿಪ್ರಾಯಪಟ್ಟರು.
ಕೆ.ಎಂ.ಇ.ಎಸ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಅವರು, ಯೋಗ ದಿನಾಚರಣೆ ಇಂದು ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದಿದ್ದು, ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಅಗತ್ಯ.
ಇದರ ಜೊತೆಗೆ ವಿದ್ಯಾರ್ಥಿಗಳು ಪೌಷ್ಟಿಕ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಯೋಗ ತರಬೇತಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕೆ. ಬಾಲಕೃಷ್ಣ ರಾವ್ ಸ್ವಾಗತಿಸಿದರು. ಪ್ರೌಢ ಶಾಲಾ ವಿಭಾಗದ ಮುಖ್ಯಸ್ಥೆ ಧನ್ಯವಾದ ಸಲ್ಲಿಸಿದ್ದು, ಪ್ರೈಮರಿ ವಿಭಾಗದ ಮುಖ್ಯಸ್ಥೆ ಲೊಲಿಟ ಡಿಸಿಲ್ವ ಉಪಸ್ಥಿತರಿದ್ದರು.


































