
ಕಾರ್ಕಳ :ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಇಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತ ನಗರದ ಹತ್ತನೇ ತರಗತಿಯ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್ ಸ್ಪರ್ಧಿಸಿ ವಿಜೇತರಾಗಿದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಹರೀಶ್ ಅಂಚನ್ ಹಾಗೂ ಶೋಭಾ ಇವರ ಪುತ್ರಿ.
ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.






















































