ಜೀವಾವಧಿ ಶಿಕ್ಷೆಗೆ ತಡೆ, ಮಧ್ಯಂತರ ಜಾಮೀನು

ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡದ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ.
ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಶಿಕ್ಷೆಗೆ ತಡೆ ನೀಡಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಇದೇ ವೇಳೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಧಾರವಾಡ ಪ್ರವೇಶಿಸಬಾರದು ಎಂದು ವಿಧಿಸಲಾಗಿದ್ದ ನಿರ್ಬಂಧವನ್ನೂ ಹೈಕೋರ್ಟ್ ರದ್ದುಪಡಿಸಿದೆ.






















































