
ನವದೆಹಲಿ,: ರಕ್ಷಣಾ ಸಚಿವ ರಾಜನಾಥ ಸಿಂಗ್ ಆರೋಗ್ಯ ತುಸು ಹದಗೆಟ್ಟಿದ್ದು ಇವರನ್ನು ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಬೆನ್ನು ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯ ನ್ಯೂರೋ ಸರ್ಜರಿ ವಿಭಾಗಕ್ಕೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಪ್ರಕಟಣೆಯಲ್ಲಿ ತಿಳಿಸಿವೆ.





