
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದಬೆಂಗಳೂರಿನ ಬಸವನ ಗುಡಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಈಜು ಸ್ಪರ್ಧೆಯಲ್ಲಿ 400 ಮೀ ಇಂಡ್ ಮಿಡ್ಲೆಯಲ್ಲಿ ಕಾರ್ಕಳ ಜ್ಷಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿಧ್ಯಾರ್ಥಿನಿಯಾದ ಕುಮಾರಿ ಭೂಮಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಕಾರ್ಕಳದ ಕೆ. ವಿ ಪ್ರವೀಣ್ ಹಾಗೂ ದೀಪ್ತಿ ಪ್ರಭು ದಂಪತಿಯ ಸುಪುತ್ರಿಯಾಗಿರುತ್ತಾರೆ.
ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂಧಿಸಿದರು.













