
ಬೆಂಗಳೂರು: ಪ್ರತಿಭೆ ಎಂಬುವುದು ಜನ್ಮದ ವರವಲ್ಲ, ಸಾಧನೆ ಎಂಬುದನ್ನು ತೋರಿಸಿಕೊಟ್ಟ ರಾಮಾಯಣ ಮಹಾಕಾವ್ಯ ಪ್ರತಿಸಿದ ದಲಿತ ಮೇಧಾವಿ ಆದಿ ಕವಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ನಮಗೆಲ್ಲರಿಗೂ ಸ್ಪೂರ್ತಿ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಪರಿಶಿಷ್ಟ ಪಂಗಡಗಳ ಸರಕಾರಿ ವಸತಿ ಶಾಲೆಗಳನ್ನು ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಎಂದು ಮರು ನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ಸಿಎಂ ವಿಧಾನಸೌಧದ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪುಷ್ಪ ನಮನ ಸಲ್ಲಿಸಿದರು. ಇನ್ನು ರಾಯಚೂರು ವಿಶ್ವ ವಿದ್ಯಾ ನಿಲಯವನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರು ನಾಮಕರಣ ಮಾಡಲಾಗುವುದು ಎಂದು ಸುದ್ದಿ ಸಂಸ್ಥೆ ಎಎನ್ಐ ತನ್ನ ವರದಿಯಲ್ಲಿ ತಿಳಿಸಿದೆ.













