
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತೆಯ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಶಾಲೆಗಳಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದಾರೆ.
- ವಿದ್ಯಾರ್ಥಿಗಳು ಕೈ ಕಾಲು ಮುಚ್ಚುವಂತಹ ಸಮವಸ್ತ್ರ, ಬಟ್ಟೆಗಳನ್ನ ಧರಿಸುವುದು.
- ಶಾಲೆಗೆ ಬರುವ ಮುನ್ನ Mosquito Repellent ಗಳನ್ನು ಕೈಕಾಲುಗಳಿಗೆ ಹಚ್ಚಿಕೊಳ್ಳುವುದು.
- ಡೆಂಗ್ಯೂ ನಿಯಂತ್ರಣ ಕ್ರಮದ ಕುರಿತು Do’s & Don’t’s ಶಾಲೆಯ ಶಾಲಾ ಕೊಠಡಿಯ ನೋಟಿಸ್ ಬೋರ್ಡ್‌ಗಳಲ್ಲಿ ಪ್ರದರ್ಶಿಸುವುದು.
- ಶುದ್ಧ ನೀರಿನ ಸಂಗ್ರಹಣ ಪರಿಕರಗಳನ್ನು ಭದ್ರವಾಗಿ ಮುಚ್ಚುವುದು ಹಾಗೂ ಕಡ್ಡಾಯವಾಗಿ ವಾರಕ್ಕೊಮ್ಮೆ ತೊಳೆದು ಸ್ವಚ್ಛಗೊಳಿಸಿ ನಂತರ ನೀರನ್ನು ತುಂಬಿಸುವುದು.
- ಘನತ್ಯಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಕಡ್ಡಾಯವಾಗಿ ಶೀಘ್ರ ವಿಲೇವಾರಿ ಮಾಡುವುದು.
- ಶಾಲಾ ಆವರಣದ ಕಟ್ಟಡಗಳ ಟೆರೇಸ್‌ನ ಮೇಲೆ ಬೀಳುವ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸುವುದು.
- ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಮಾಹಿತಿಯನ್ನು ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಪ್ರಚಾರ ಪಡಿಸುವುದು.
- ಪೋಷಕರ ಸಭೆಗಳಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಅರಿವು ಮೂಡಿಸುವುದರೊಂದಿಗೆ ಪೋಷಕರ ವಾಟ್ಸಪ್ ಗ್ರೂಪ್‌ಗಳಲ್ಲಿ ಮಾಹಿತಿ ಹಂಚುವುದು.
- ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಎಸ್ಡಿಎಂಸಿ ಸಹಕಾರದೊಂದಿಗೆ ಸೊಳ್ಳೆ ನಿರೋಧಕಗಳನ್ನ ವಿದ್ಯಾರ್ಥಿಗಳಿಗೆ ಆದ್ಯತೆ ಮೇಲೆ ಪೂರೈಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು.
- ಶಾಲೆಯ ಅಕ್ಕಪಕ್ಕದಲ್ಲಿರುವ ಖಾಲಿ ನಿವೇಶನಗಳಲ್ಲಿ ಘನ ತ್ಯಾಜ್ಯ ವಸ್ತುಗಳು ಸಂಗ್ರಹವಾಗದಂತೆ ಕ್ರಮವಹಿಸುವುದು.
- ಅಗತ್ಯವಿದ್ದಲ್ಲಿ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ಪಡೆಯುವುದು.
ಈ ಮೇಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಡಿಡಿಪಿಐಗಳು, ಬಿಇಓಗಳು ಶಾಲೆಗಳಲ್ಲಿ ಪಾಲಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.













