ಮಕ್ಕಳನ್ನು ಸಿಹಿ ಊಟ ನೀಡಿ ಬರಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ

ಇಂದಿನಿಂದ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿದ್ದು, ಮೊದಲನೇ ದಿನ ಮಕ್ಕಳನ್ನು ಸಿಹಿಯೂಟ ನೀಡಿ ಆತ್ಮೀಯವಾಗಿ ಬರಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಶಾಲಾ ಆರಂಭ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ,ಸಮವಸ್ತ್ರ ವಿತರಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಶಾಲಾ ಪಠ್ಯ ಪರಿಷ್ಕರಣೆಯ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ,ಈ ಬಾರಿ ಶಾಲಾ ಪಠ್ಯ ಪರಿಷ್ಕರಣೆ ಇಲ್ಲ ಎಂದು ತಿಳಿಸಿದ್ದಾರೆ. ಕಳೆದ ಬಾರಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಈ ಬಾರಿ ತಪ್ಪಿದ್ದ ಪದಗಳನ್ನು ಸರಿ ಮಾಡಲಾಗಿದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.